ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಪೊಲೀಸರು ಬಿಹಾರ ಮೂಲದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ಹ್ಯಾಕ್ ಆಗಿತ್ತು. ಕಿಡಿಗೇಡಿಗಳು ದಂಪತಿಯ ಫೋನ್ ನಂಬರ್ ಹ್ಯಾಕ್ ಮಾಡಿದ್ದು, ಹಣ ಹಾಕುವಂತೆ ಮೆಸೇಜ್‌ಗಳ ಮೂಲಕ ಕೇಳಿದ್ದರು.
ಈ ಬಗ್ಗೆ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ವಿಡಿಯೋ ಮೂಲಕ ಮಾಹಿತಿ ನೀಡಿದ್ದು, ನನ್ನ ಹಾಗೂ ಪತ್ನಿ ಪ್ರಿಯಾಂಕಾ ಅವರ ಫೋನ್ ನಂಬರ್‌ಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಫೋನ್ ಮೂಲಕ ಬರಿ ಸಂದೇಶಗಳನ್ನು ಕಳುಹಿಸುತ್ತಿದ್ದು, ಅರ್ಜೆಂಟಾಗಿ ಹಣ ನೀಡುವಂತೆ ಮೆಸೇಜ್ ಕಳುಹಿಸುತ್ತಿದ್ದಾರೆ.
ಇದನ್ನು ಓದಿ: ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್ ಹ್ಯಾಕ್
ನಮ್ಮ ಫೋನ್ ನಂಬರ್‌ಗಳಿಂದ ಕರೆ ಅಥವಾ ಮೆಸೇಜ್ ಬಂದರೆ ದಯವಿಟ್ಟು ಯಾರೂ ಹಣ ಹಾಕಬೇಡಿ. ಫೋನ್ ನಂಬರ್ ಹ್ಯಾಕ್ ಆಗಿದೆ ಎಂದು ಮನವಿ ಮಾಡಿದ್ದರು. ಅಲ್ಲದೇ ಫೋನ್ ನಂಬರ್ ಹ್ಯಾಕ್ ಆಗಿರುವ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಬಿಹಾರಿ ಹ್ಯಾಕರ್‌ಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ವಿಶೇಷ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲಕ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ವಿಕಾಸ್ ಕುಮಾರ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ತನಿಖೆ ಮುಂದುವರಿದಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…