ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್ ಖಾನ್ ಕ್ಷಮೆ ಕೇಳಿದ್ದಾರೆ.
ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಈವೆಂಟ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.
ಅಕ್ರಮವಾಗಿ ಅಳವಡಿಸಿದ್ದ ಒಂದು ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.
ಈ ಪ್ರಕರಣ ಭಾರೀ ಸುದ್ದಿಯಾಗಿದುದ, ರಾಜೀವ್ ಗೌಡ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದೆ. ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ರಾಜೀವ್‌ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಘಟನೆ ಬಗ್ಗೆ ನಟ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ನನ್ನ ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಈ ಘಟನೆ ಬಗ್ಗೆ ನನಗೆ ತಿಳಿದಿರಲಿಲ್ಲ. ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…