ರಾಜ್ಯ

ಬ್ಯಾನರ್‌ ವಿಚಾರವಾಗಿ ಪೌರಾಯುಕ್ತಗೆ ನಿಂದನೆ ಪ್ರಕರಣ: ಕ್ಷಮೆ ಕೇಳಿದ ನಟ ಝೈದ್‌ ಖಾನ್‌

ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವು ಮಾಡಿದ್ದಕ್ಕೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಬೆನ್ನಲ್ಲೇ ನಟ ಝೈದ್‌ ಖಾನ್‌ ಕ್ಷಮೆ ಕೇಳಿದ್ದಾರೆ.

ಝೈದ್‌ ಖಾನ್‌ ಅಭಿನಯದ ಕಲ್ಟ್‌ ಸಿನಿಮಾದ ಈವೆಂಟ್‌ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.

ಅಕ್ರಮವಾಗಿ ಅಳವಡಿಸಿದ್ದ ಒಂದು ಬ್ಯಾನರ್‌ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.

ಈ ಪ್ರಕರಣ ಭಾರೀ ಸುದ್ದಿಯಾಗಿದುದ, ರಾಜೀವ್‌ ಗೌಡ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ. ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದು, ರಾಜೀವ್‌ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಘಟನೆ ಬಗ್ಗೆ ನಟ ಝೈದ್‌ ಖಾನ್‌ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ನನ್ನ ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. ಈ ಘಟನೆ ಬಗ್ಗೆ ನನಗೆ ತಿಳಿದಿರಲಿಲ್ಲ. ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಅಭಿಮಾನಿಗಳ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

3 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

15 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

16 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

16 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

16 hours ago