Mysore
25
overcast clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ ಜಯಮ್ಮ ವಿಧಿವಶರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಯಮ್ಮ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.

Tags:
error: Content is protected !!