ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಆದ ಕಾರಣ ಕೂಡಲೆ ಆಸ್ಪತ್ರಗೆ ದಾಖಲಿಸಲಾಗಿತ್ತು.
ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಹೇಮಾ ಅವರ ದೇಹ ಯಾವುದೇ ರೀತಿಯ ಚಿಕಿತ್ಸೆಗೆ ಸ್ಪದಿಸುತ್ತಿಲ್ಲ ಎಂದು ತಿಳಿದುಬಂದಿದೆ.
ಇನ್ನು ಹೇಮಾ ಅವರ ಮಗ ಐರ್ಲೆಂಡ್‌ನಲ್ಲಿದ್ದು, ಅವರು ಬರುವ ತನಕ ಹೇಮಾ ಚೌಧರಿ ಅವರನ್ನು ತೀವ್ರ ನಿಗಾ ಘಟಕದಲ್ಲೇ ಇರಿಸಿ ಚಿಕಿತ್ಸೆ ಮುಂದುವರೆಸುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.