ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.
ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಿ ಮೋರಿ ಸಮೀಪ ಬಿಸಾಕಿದ್ದಾರೆ ಎಂಬ ಆರೋಪ ಡಿ ಗ್ಯಾಂಗ್ ಮೇಲಿದೆ. ಹೀಗೆ ಆರೋಪ ಎದುರಿಸುತ್ತಾ ಕಳೆದೊಂದು ವಾರದಿಂದ ಸತತವಾಗಿ ಪೊಲೀಸರ ವಿಚಾರಣೆಗೆ ಒಳಗಾಗಿರುವ ದರ್ಶನ್ ವಿರುದ್ಧ ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಇನ್ನು ಈ ಪ್ರಕರಣದ ಬಗ್ಗೆ ಕೆಲವೇ ಕಲಾವಿದರು ಮಾತ್ರ ಪ್ರತಿಕ್ರಿಯಿಸಿದ್ದು, ಇದೀಗ ನಟಿ ರಚಿತಾ ರಾಮ್ ಸಹ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಚಿತಾರಾಮ್ ಈ ನೋಟ್ ಅನ್ನು ನಾನು ನಟಿಯಾಗಿ ಬರೆಯುತ್ತಿಲ್ಲ, ಓರ್ವ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದು, ರೇಣುಕಾಸ್ವಾಮಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದಿದ್ದಾರೆ. ಅಲ್ಲದೇ ತನ್ನನ್ನು ಚಿತ್ರರಂಗಕ್ಕೆ ಕರೆತಂದ ದರ್ಶನ್ ತನ್ನ ಗುರು ಸಮಾನ, ಅವರು ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಕಷ್ಟಕರ, ಸತ್ಯ ಪೊಲೀಸ್ ತನಿಖೆಯಿಂದ ಆಚೆ ಬರಲಿ ಎಂದು ಆಶಿಸಿದ್ದಾರೆ.
ರಚಿತಾ ಪೋಸ್ಟ್ ಹೀಗಿದೆ:
ನಮಸ್ಕಾರ
ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು!ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.
ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಶ್ಚಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ..
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…