ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೊದ್ರಲ್ಲಿ ತಪ್ಪೇನಿದೆ ಎಂದು ನಟ ರಮ್ಯಾ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಹಂಪಿ ಉತ್ಸವದಲ್ಲಿ ಮಾತನಾಡಿದ ಅವರು, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಅದಕ್ಕೆ ನನ್ನ ಸಹಮಿತವಿದೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು. ಡಾ.ರಾಜ್‌ಕುಮಾರ್ ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ ಎಂದರು.





