ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋರ್ಟ್‌ಗೆ 380 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
11 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು 45ನೇ ಎಸಿಜೆಎಂ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಅಶ್ಲೀಲ ಮೆಸೇಜ್ ಮಾಡಿದ್ದ ಸ್ಕ್ರೀನ್ ಶಾಟ್ ಸೇರಿದಂತೆ ಸುದೀರ್ಘ ವಿವರಗಳನ್ನು ಒಳಗೊಂಡ ಚಾರ್ಜ್‌ಶೀಟ್ ಸಿದ್ಧಪಡಿಸಿದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಇದನ್ನು ಓದಿ : ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಮೆಸೇಜ್: ಬೆಂಗಳೂರು ಕಮೀಷನರ್‌ಗೆ ಕೆಪಿಸಿಸಿ ಮಹಿಳಾ ಘಟಕದಿಂದ ದೂರು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಕಮೆಂಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಹಲವರು ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 43 ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಮೆಸೇಜ್ ಮಾಡಿದ್ದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿ ಹಲವರನ್ನು ಬಂಧಿಸಿದ್ದರು.





