ರಾಜ್ಯ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಪ್ರಕರಣ: ಸಿಸಿಬಿಯಿಂದ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋರ್ಟ್‌ಗೆ 380 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

11 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು 45ನೇ ಎಸಿಜೆಎಂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

ಅಶ್ಲೀಲ ಮೆಸೇಜ್‌ ಮಾಡಿದ್ದ ಸ್ಕ್ರೀನ್‌ ಶಾಟ್‌ ಸೇರಿದಂತೆ ಸುದೀರ್ಘ ವಿವರಗಳನ್ನು ಒಳಗೊಂಡ ಚಾರ್ಜ್‌ಶೀಟ್‌ ಸಿದ್ಧಪಡಿಸಿದ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ.

ಇದನ್ನು ಓದಿ :  ದರ್ಶನ್‌ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಮೆಸೇಜ್:‌ ಬೆಂಗಳೂರು ಕಮೀಷನರ್‌ಗೆ ಕೆಪಿಸಿಸಿ ಮಹಿಳಾ ಘಟಕದಿಂದ ದೂರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಕಮೆಂಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಹಲವರು ರಮ್ಯಾಗೆ ಅಶ್ಲೀಲ ಮೆಸೇಜ್‌ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ 43 ಅಕೌಂಟ್‌ಗಳ ವಿರುದ್ಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಮೆಸೇಜ್‌ ಮಾಡಿದ್ದ 48 ಕಿಡಿಗೇಡಿಗಳ ಐಪಿ ಅಡ್ರೆಸ್‌ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿ ಹಲವರನ್ನು ಬಂಧಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

55 seconds ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

10 mins ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

42 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago