ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣ ಸಂಬಂಧ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಇದೀಗ ರನ್ಯಾ ಪರ ವಕೀಲರು ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಪ್ರಕರಣ ಕುರಿತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ತನಿಖೆ ನಡೆಸುತ್ತಿದೆ.




