ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಗೆ ಸಮಿತಿಯೊಂದನ್ನು ರಚನೆ ಮಾಡಲಾಗಿದೆ. ಗೌರವ್ ಗುಪ್ತಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮೊದಲು ಸಿಐಡಿ ತನಿಖೆಗೆ ಸೂಚನೆ ನೀಡಲಾಗಿತ್ತು. ತನಿಖೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಮಾಹಿತಿ ಸಿಕ್ಕರೆ ನಾನೇ ತಿಳಿಸುತ್ತೇನೆ. ಸಂಪೂರ್ಣ ತನಿಖೆಯಾದ ಬಳಿಕ ನಮಗೆ ಮಾಹಿತಿ ಸಿಗುತ್ತದೆ ಎಂದು ಹೇಳಿದರು.
ಇನ್ನು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ನಿನ್ನೆಯಷ್ಟೇ ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಯೂಟ್ಯೂಬ್ ನೋಡಿ ಕಳ್ಳಸಾಗಾಣಿಕೆ ಮಾಡೋದು ಹೇಗೆ ಎಂಬುದನ್ನು ಕಲಿತೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…