ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು.
ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಕಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು.
ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ.15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1090 ಕೋಟಿ ರೂಪಾಯಿ ದೊರೆಯಲಿದೆ ಎಂದು ಹೇಳಿದರು.
ಒಂದು ಸಾವಿರ ಮೆಡಿಕಲ್ ಸೀಟ್ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದು ಡಾ. ಪಾಟೀಲ್ ಹೇಳಿದರು.
ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…