ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂಬ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆ ಸಿಎಂ ಬಾಲಿಶ ಎಂದರು.
ಇನ್ನು MESನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.