ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್, ತಮಗೆ ಮನೆಯಿಂದ ಊಟ ಬೇಕು, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಇಂದು(ಜು.18)ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ನಾಳೆಗೆ(ಜು.19) ವಿಚಾರಣೆ ಮುಂದೂಡಿದೆ.
ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ, ನಟ ದರ್ಶನ್ ಅರ್ಜಿಗೆ ಸರ್ಕಾರ ಹಾಗೂ ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ಆದೇಶಿಸಿದರು.