ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಶ್ ಪಾಟೀಲ್ ಹಿನ್ನಡೆ ಸಾಧಿಸಿದ್ದಾರೆ.
ಬೆಳಿಗ್ಗೆ 10:45 ರ ಸಮಯಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 203840 ಮತಗಳನ್ನು ಪಡೆದಿದ್ದಾರೆ. ಅವರ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೇಯಸ್ ಪಾಟೀಲ್ 197555 ಮತಗಳನ್ನು ಪಡೆದಿದ್ದು, ಸದ್ಯ ಪ್ರಜ್ವಲ್ 6285 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ. ಇತ್ತ ಜೆಡಿಎಸ್ ಕಾರ್ಯಕರ್ತರು ಪ್ರಜ್ವಲ್ ಗೆಲುವಿಗೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.





