ರಾಜ್ಯ

Loksabha Election Results 2024: ಹಾಸನದಲ್ಲಿ ಪ್ರಜ್ವಲ್‌ಗೆ ಮುನ್ನಡೆ

ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ.  ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಶ್‌ ಪಾಟೀಲ್‌ ಹಿನ್ನಡೆ ಸಾಧಿಸಿದ್ದಾರೆ.

ಬೆಳಿಗ್ಗೆ 10:45 ರ ಸಮಯಕ್ಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ 203840 ಮತಗಳನ್ನು ಪಡೆದಿದ್ದಾರೆ. ಅವರ ಎದುರಾಳಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶ್ರೇಯಸ್‌ ಪಾಟೀಲ್‌ 197555 ಮತಗಳನ್ನು ಪಡೆದಿದ್ದು, ಸದ್ಯ ಪ್ರಜ್ವಲ್‌ 6285 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್‌ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ. ಇತ್ತ ಜೆಡಿಎಸ್‌ ಕಾರ್ಯಕರ್ತರು ಪ್ರಜ್ವಲ್‌ ಗೆಲುವಿಗೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

1 hour ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

1 hour ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

2 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

3 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

12 hours ago