ಕೇರಳ: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಭಾರೀ ಆತಂಕ ಮನೆಮಾಡಿದೆ.
ಆಫ್ರಿಕನ್ ಹಂದಿಜ್ವರ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ಹಂದಿ ಖಾಯಿಲೆಯಾಗಿದ್ದು, ಇದು ಕಾಡು ಹಂದಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ತ್ರಿಶೂರ್ ಜಿಲ್ಲೆಯ ಮಡಕ್ಕತಾರಾ ಪಂಚಾಯತ್‌ನ ಖಾಸಗಿ ಜಮೀನಿನಲ್ಲಿ ೩೧೦ ಹಂದಿಗಳನ್ನು ಕೊಲ್ಲಲು ಆದೇಶಿಸಲಾಗಿದೆ.
ಕೇರಳದಲ್ಲಿ ಹಂದಿ ರೋಗದ ಹಾವಳಿ ಹೆಚ್ಚಾಗಿದ್ದು, ಇದು ಹಂದಿಗಳಿಂದ ಜನರಿಗೆ ಹರಡುವುದಿಲ್ಲ. ಆದರೆ ಹಂದಿಗಳಿಗೆ ಬೇಗ ಹರಡುತ್ತದೆ. ಒಂದು ಹಂದಿಯಿಂದ ಮತ್ತೊಂದು ಹಂದಿಗೆ ಬೇಗ ಸೋಂಕು ಹರಡುವ ಕಾರಣ ೩೧೦ ಹಂದಿಗಳನ್ನು ಕೊಲ್ಲಲು ಆದೇಶ ಹೊರಡಿಸಲಾಗಿದೆ.
ಹಾನಿಗೊಳಗಾದ ಜಮೀನಿನ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ೧೦ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ.
ತ್ರಿಶೂರ್ ಅಥವಾ ಇತರ ಪ್ರದೇಶಗಳಿಂದ ಹಂದಿಗಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ.
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…