ರಾಜ್ಯ

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆ!

ಹುಬ್ಬಳ್ಳಿ: ನನ್ನ ಮೇಲೆ ಯಾವುದೇ ಕೇಸ್‌ ಇರಲಿಲ್ಲ. ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡ ಬಳಿಕವೇ ಬೆಳಗಾವಿಗೆ ಹೋಗಿದ್ದೆ. ಬಂಧನಕ್ಕೀಡಾಗಿದ್ದ ದಿನ ನಾನು ಬೆಳಿಗ್ಗೆ ಬೆಳಗಾವಿಯಿಂದ ಬಂದಿದ್ದೆ. ನಿಮ್ಮ ಜೊತೆ ಮಾತನಾಡಬೇಕು ಎಂದು ಹೇಳಿ, ಹಾಗೆ ಕರೆದುಕೊಂಡು ಹೋದವರು ಸೀದಾ ಜೈಲ್‌ಗೆ ಹಾಕಿದ್ರು. ಇದು ಇಂದು ಹುಬ್ಬಳ್ಳಿ ಕಾರಾಗೃಹದಿಂದ ಬಿಡುಗಡೆಗೊಂಡ ಕರಸೇವಕ ಶ್ರೀಕಾಂತ್‌ ಪೂಜಾರಿ ಅವರ ಮೊಲದ ಪ್ರತಿಕ್ರಿಯೆಯಾಗಿದೆ.

ಬಿಡುಗಡೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಮೇಲೆ ಯಾವುದೇ ಪ್ರಕರಣ ಬಾಕಿ ಇರಲಿಲ್ಲ, ನನ್ನ ಮೇಲೆ ಹಿಂದೆ ಇದ್ದ ಎಲ್ಲಾ ಪ್ರಕರಣಗಳು ಇತ್ಯರ್ಥವಾಗಿದ್ದವು. ಎಲ್ಲಾ ಪ್ರಕರಣಗಳನ್ನು ಮರೆತು ಜೀವನ ನಡೆಸುತ್ತಿದ್ದ ನನ್ನನ್ನು ಸುಮ್ಮನೇ ಬಂಧಿಸಲಾಗಿತ್ತು ಎಂದು ಹೇಳಿದ್ದಾರೆ.

ನನ್ನನ್ನು ಬಂಧಿಸಿದ ದಿನ ನಾನು ಬೆಳಗಾವಿಯಿಂದ ಹುಬ್ಬಳ್ಳಿಗೆ ಬಂದ ಸಮಯದಲ್ಲಿ ಬಸ್‌ ನಿಲ್ದಾಣದಲ್ಲಿಯೇ ಪೊಲೀಸರು ನನ್ನ ತಡೆದು, ನಿಮ್ಮ ಜೊತೆಯಲ್ಲಿ ಮಾತನಾಡವುದಿದೆ ಎಂದು ಕರೆದರು. ನಂತರ ಬರುವುದಾಗಿ ತಿಳಿಸಿದರು ಸಹಾ ನಾವೇ ನಿಮ್ಮನ್ನು ಮನೆಗೆ ಬಿಡುವುದಾಗಿ ಹೇಳಿ ಜೀಪ್‌ ಹತ್ತಿಸಿಕೊಂಡು ಶಹರ ಪೊಲೀಸ್‌ ಠಾಣೆಗೆ ಕರೆದೊಯ್ದರು.

ನಾನು ಇಲ್ಲಿಗೆ ಏಕೆ ಕರೆ ತಂದಿದ್ದೀರಿ ಎಂದು ಕೇಳಿದ್ದಕ್ಕೆ, ಒಳಗೆ ನಡೆಯಿರಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದ್ದು, ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಕರೆದೊಯ್ದು ನನ್ನನ್ನು ಬಂಧಿಸಿದರು ಎಂದು ಶ್ರೀಕಾಂತ್‌ ಪೂಜಾರಿ ಸವಿವರವಾಗಿ ಮಾಹಿತಿ ನೀಡಿದರು.

ಇನ್ನೂ ಜೈಲಿನಲ್ಲಿದ್ದಾಗ ಪೂಜಾರಿ ಪರ ವಿವಿಧ ಸಂಘ ಸಂಸ್ಥೆಗಳು ಹೋರಾಟ ಮಾಡಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಈ ಬಗ್ಗೆ ಸ್ವಲ್ಪ-ಸ್ವಲ್ಪ ಮಾಹಿತಿಯಿದೆ. ನನ್ನ ಪರವಾಗಿ ಧನಿಯೆತ್ತಿದ ಬಿಜೆಪಿ ನಾಯಕರು, ಕಾರ್ಯಕ್ರತರು ಮತ್ತು ಹಿಂದೂಪರ ಸಂಘಟನೆಗಳಿಗೆ ಧನ್ಯವಾಗಳನ್ನು ಅರ್ಪಿಸಿದರು.

ಇನ್ನು ಇದೇ ವೇಳೆ ಜನವರಿ ೨೨ ರಿಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆಗೆ ಖಚಿತವಾಗಿಯೂ ಹೋಗುತ್ತೇನೆ, ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಕ್ಕೆ ತಪ್ಪಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago