Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಎರಡನೇ ವಿಮಾನ ನಿಲ್ದಾಣದ ಬಗ್ಗೆ ವಿಸ್ತೃತ ಚರ್ಚೆ ಬಳಿಕ ತೀರ್ಮಾನ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್‌ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್‌ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ ೨೦೩೩ರವರೆಗೂ ೧೫೦ ಕಿ.ಮೀ ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.

ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್‌ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.

 

Tags:
error: Content is protected !!