ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜೊತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ ೨೦೩೩ರವರೆಗೂ ೧೫೦ ಕಿ.ಮೀ ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.
ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ಡಾಬಸ್‌ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…