ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಅವರ ಅಣ್ಣ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಪ್ರಜ್ವಲ್ ರೇವಣ್ಣ ಅವರ ಅಣ್ಣ ಸೂರಜ್ ರೇವಣ್ಣ ಅವರ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ, ಮುಖ್ಯಮಂತ್ರಿ, ಗೃಹಸಚಿವರು, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸೂರಜ್ ರೇವಣ್ಣ ಅವರು ಜೂನ್ 16 ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನಿಗೆ ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಸಿಕೊಂಡು ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…