ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್‌ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.
ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಸಿಎ ಸೈಟ್‌ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್‌ನ ಅಧ್ಯಕ್ಷ ರಾಹುಲ್ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.
ನಂತರ, ನಮ್ಮ ಅಣ್ಣ ರಾಹುಲ್ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್‌ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…