ರಾಜ್ಯ

ವಿವಾದದ ಬಳಿಕ ಕೆಐಎಡಿಬಿಗೆ ಸೈಟ್‌ ವಾಪಸ್‌ ನೀಡಿದ ಖರ್ಗೆ ಕುಟುಂಬ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್‌ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್‌ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ.

ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಸಿಎ ಸೈಟ್‌ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್‌ ಹಿಂತಿರುಗಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಕೆಐಎಡಿಬಿ ಹಂಚಿಕೆ ಮಾಡಿದ್ದ ನಿವೇಶನವನ್ನು ವಾಪಾಸ್‌ ನೀಡಲು ತೀರ್ಮಾನಿಸಲಾಗಿದೆ. ಏಕೆಂದರೆ ಈ ನಿವೇಶನದ ಬಗ್ಗೆ ಕಾನೂನು ಬಾಹಿರವಾಗಿ ಸೈಟ್‌ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಅಲ್ಲದೇ, ಈ ವಿಚಾರದಲ್ಲಿ ಟ್ರಸ್ಟ್‌ನ ಅಧ್ಯಕ್ಷ ರಾಹುಲ್‌ ಅವರಿಗೆ ಮಾಹಿತಿ ದೊರಕಿರಲಿಲ್ಲ ಅಂತ ಅನ್ನಿಸುತ್ತೆ. ನಮ್ಮ ಕುಟುಂಬದಿಂದ ಮೂರು ಮಂದಿ ಅಷ್ಟೇ ರಾಜಕೀಯದಲ್ಲಿ ಸಕ್ರಿಯವಾಗಿದ್ದೇವೆ ಎಂದರು.

ನಂತರ, ನಮ್ಮ ಅಣ್ಣ ರಾಹುಲ್‌ ಖರ್ಗೆ ಅವರು ಮೃದು ಸ್ವಭಾವದ ವ್ಯಕ್ತಿಯಾಗಿದ್ದಾರೆ. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ಭಾವಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್‌.29 ರಂದು ಕೆಐಎಡಿಬಿಗೆ ಹಂಚಿಕೆಯಾಗಿರುವ ಸೈಟ್‌ಗಳನ್ನು ಹಿಂಪಡೆಯಲು ಪತ್ರ ಬರೆದಿದ್ದು, ನಿವೇಶನಗಳನ್ನು ನೀಡಿರುವುದನ್ನು ಕಾನೂನಾತ್ಮಕವಾಗಿಯೇ ಮರಳಿ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

21 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

1 hour ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

1 hour ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

2 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago