ರಾಜ್ಯ

ಖಂಡ್ರೆ ಖಡಕ್ ಆದೇಶ ಬಳಿಕ ಪಶ್ಚಿಮಘಟ್ಟದಲ್ಲಿ 69 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.

ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

16 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

48 mins ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

3 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago