ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.
ತಮ್ಮ ಕಚೇರಿಯಲ್ಲಿಂದು ಇಂಡಿಯನ್ ಸ್ಟಾರ್ಟಫ್ ಟೂರ್ 2024 ಅಂಗವಾಗಿ ದೇಶದ ವಿವಿಧೆಡೆಯಿಂದ ಆಗಮಿಸಿದ ಛಾತ್ರ ಸಂಸದ್ ನ ಯುವ ನವೋದ್ಯಮಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ ಅವರು
ಕೃಷಿ ಅಭ್ಯುದಯಕ್ಕೆ ಸರ್ಕಾರ ಹತ್ತಾರು ಪ್ರಮುಖ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ ಎಂದರು.
ರಾಜ್ಯದಲ್ಲಿ ಬಹುತೇಕ ಮಳೆಯಾಶ್ರಿತ ಜಮೀನು ಹೊಂದಿದ್ದು ಬರ ಹಾಗೂ ಅತೀವೃಷ್ಠಿ ನಮ್ಮ ಮುಂದಿರುವ ಬಹುದೊಡ್ಡ ಸವಾಲಾಗಿದೆ ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವೂ ಶ್ರಮಿಸುತ್ತಿದೆ ಎಂದರು.
ಕೃಷಿ ಯಾಂತ್ರೀಕರಣ, ಮೌಲ್ಯ ವರ್ಧನೆ, ಉತ್ಪಾದನೆ ಹೆಚ್ಚಳ ನಮ್ಮ ಆದ್ಯತೆ. ಮಾರುಕಟ್ಟೆ ಸರಪಣಿ ಬಲ ಪಡಿಸಲೂ ಸಹ ನಮ್ಮ ಸರ್ಕಾರ ಗಮನ ಹರಿಸಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಛಾತ್ರ ಸಂಸದ್ ನ ಪ್ರತಿನಿಧಿಗಳ ಅಭಿಪ್ರಾಯ ಅಲಿಸಿದ ಸಚಿವರು ಅವರ ಪ್ರಶ್ನೆಗಳಿಗೂ ಉತ್ತರ ನೀಡಿದರು.
ದೇಶದಲ್ಲಿ ಕರ್ನಾಟಕ ತಂತ್ರಜ್ಞಾನ ಬಳಕೆಯಲ್ಲಿ ನಾಲ್ಕನೆಯ ಸ್ಥಾನದಲ್ಲಿದೆ. ಜಲಾನಯನ ಅಭಿವೃದ್ಧಿಯಲ್ಲಿಯೂ ವಿಶ್ವ ಬ್ಯಾಂಕ್ ನಮ್ಮ ರಾಜ್ಯವನ್ನು ಮುಂಚೂಣಿ ನಾಯಕನಂತೆ ಗುರುತಿಸಿದೆ ಎಂದರು.
ರಾಜ್ಯದಲ್ಲಿ ಬೆಳೆ ವಿಮೆ ನೊಂದಣಿ ,ಪರಿಹಾರ ಇತ್ಯರ್ಥ ,ಬೆಳೆ ಸಮೀಕ್ಷೆಗಳು ಪರಿಣಾಮಕಾರಿಯಾಗಿ ನಡೆಯುತ್ತಿವೆ ಎಂದರು.
ಸಮಗ್ರ ಕೃಷಿ ಹೆಚ್ಚು ಲಾಭದಾಯಕ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಿದೆ ರೈತರು ಅದನ್ನು ಅನುಸರಿಸುವುದು ಉತ್ತಮ ಎಂದು ಕೃಷಿ ಸಚಿವರು ಅಭಿಪ್ರಾಯ ಪಟ್ಟರು.
ಕೃಷಿ ಇಲಾಖೆ ಕಾರ್ಯದರ್ಶಿ ವಿ. ಅನ್ಬುಕುಮಾರ್, ಆಯುಕ್ತರಾದ ವೈ.ಎಸ್ ಪಾಟೀಲ್, ನಿರ್ದೇಶಕರಾದ ಡಾ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಅಯುಕ್ತರಾದ ಮಹೇಶ್ ಶಿರೂರು, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್ ಮತ್ತಿತರು ಹಾಜರಿದ್ದು ನವೋದ್ಯಮಿಗಳಿಗೆ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ನವದೆಹಲಿ/ನ್ಯೂಯಾರ್ಕ್: ವಿಶ್ವಸಂಸ್ಥೆಯ ಇಂಟರ್‌ನಲ್ ಜಸ್ಟೀಸ್ ಕೌನ್ಸಿಲ್‌ನ (ಆಂತರಿಕ ನ್ಯಾಯ ಮಂಡಳಿ) ಮುಖ್ಯಸ್ಥರಾಗಿ ಭಾರತದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್…
ಮಂಡ್ಯ: ಜಿಲ್ಲೆಯ ಚರಿತ್ರೆ, ಸಾಮಾಜಿಕ ವಿಚಾರ ನೋಡಿದರೆ ಹಲವಾರು ಪ್ರಥಮಗಳನ್ನು ಮಂಡ್ಯ ದಾಖಲಿಸಿದೆ. ಮೈಸೂರಿನಿಂದ ಪ್ರತ್ಯೇಕವಾದ ಮೇಲೂ ಹಲವು ಅದ್ಭುತಗಳನ್ನು…
ನವದೆಹಲಿ: ಡಾ.ಬಿ.ಆರ್.ಅಂಬೇಡ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಅಗೌರವದ ಹೇಳಿಕೆ ನೀಡಿರುವುದಕ್ಕೆ ದೇಶಾದ್ಯಂತ ಆಕ್ರೋಶ…
ದೇಶಿಯ ಮಿನಿ ಚುಟುಕು ಕ್ರಿಕೆಟ್ ಟೂರ್ನಿಗಳಲ್ಲಿ ಯಶಸ್ಸು ಕಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್), ಸೀಸನ್ 18ರ ಆರಂಭಕ್ಕೆ ದಿನಾಂಕ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು…
ಮಂಡ್ಯ: ಪ್ರಾಜೆಕ್ಟ್ ವರ್ಕ್ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ…