ರಾಜ್ಯ

ಕೃಷಿ ವಿಶ್ವ ವಿದ್ಯಾನಿಲಯ ವಿನೂತನ ಉತ್ಪನ್ನಗಳ ಸಂತೆಗೆ ಚಾಲನೆ‌‌‌ ನೀಡಿದ ಎನ್. ಚಲುವರಾಯಸ್ವಾಮಿ‌

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಿದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ ʼಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು(ಜೂ.22) ಚಾಲನೆ ನೀಡಿದರು‌‌.

ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ ಈ ವಿನೂತನ ಸಂತೆಯಲ್ಲಿ, ಬೆಂಗಳೂರು ಕೃಷಿ ವಿವಿಯ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ ವಿಸ್ತರಣಾ ಹಾಗೂ ಕೃಷಿ ಮಹಾವಿದ್ಯಾಲಯಗಳಲ್ಲಿ ಸಂಶೋಧನೆಗೊಳಪಟ್ಟು ಉತ್ಪಾದಿಸಲಾದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನಗಳನ್ನು ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಸಂತೆಯನ್ನು ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ದಿ ಸಾಮಾಗ್ರಿಗಳು, ಜೈವಿಕ ಗೊಬ್ಬರಗಳು, ಜೇನು ಕೃಷಿ, ಕೇಕ್ ಪ್ರದರ್ಶನ ಸೇರಿದಂತೆ ಇನ್ನೂ ಮುಂತಾದವುಗಳನ್ನು ಈ ಸಂತೆಯಲ್ಲಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಕೆವಿಕೆ ಉಪ ಕುಲಪತಿ ಸುರೇಶ್, ಸಿಬ್ಬಂದಿ ವರ್ಗ ಹಾಗೂ ನೂರಾರು  ವಿದ್ಯಾರ್ಥಿಗಳು ಭಾಗವಹಿಸಿದ್ದರು‌‌‌.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

23 mins ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

1 hour ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

2 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

3 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

3 hours ago

ಓದುಗರ ಪತ್ರ: ವಿಜಯ್ ಉತ್ತಮ ಆಡಳಿತ ನೀಡಲಿ

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…

3 hours ago