ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್ ತೆರಳಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಠಿಯಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ ಕೆಲ ಸಮಯಗಳ ಕಾಲ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ಜೊತೆ ನನ್ನ ನಿವಾಸಕ್ಕೆ ಆಗಮಿಸಿ, ನನ್ನ ಆರೋಗ್ಯ ವಿಚಾರಿಸಿ ಆದಷ್ಟು ಶೀಘ್ರ ಮಂಡಿನೋವಿನಿಂದ ಗುಣಮುಖರಾಗುವಂತೆ ಹಾರೈಸಿದರು. ನನ್ನ ಮೇಲಿನ ಅವರ ವಿಶ್ವಾಸ – ಕಾಳಜಿಗೆ ಪ್ರೀತಿ ಪೂರ್ವಕ ಧನ್ಯವಾದ ಎಂದು ತಿಳಿಸಿದ್ದಾರೆ.