Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಅಧಿಕಾರ ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ದೆಹಲಿಗೆ ವಾಪಸ್‌ ಆಗುತ್ತಿರುವ ಖರ್ಗೆ ಅವರು ಅಧಿಕಾರ ಹಂಚಿಕೆ ಕುರಿತು ಕೆಲ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ದಾಖಲೆ ಮಟ್ಟದ ಹುಂಡಿ ಸಂಗ್ರಹ

ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಸಿಎಂ, ಡಿಸಿಎಂ ಸೇರಿದಂತೆ ನಾಲ್ಕು ಮಂದಿ ನಾಯಕರನ್ನು ಕರೆಸಿ ಎಲ್ಲರೂ ಒಟ್ಟಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಕಾಂಗ್ರೆಸ್‌ ಹೈಕಮಾಂಡ್‌ ಏಕಾಂಗಿಯಲ್ಲ. ಅದೊಂದು ತಂಡ. ಹೈಕಮಾಂಡ್‌ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ತೀರ್ಮಾನಿಸುತ್ತೇವೆ ಎಂದು ಹೇಳಿದರು.

Tags:
error: Content is protected !!