ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಇದ್ದ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು ದೆಹಲಿಗೆ ವಾಪಸ್ ಆಗುತ್ತಿರುವ ಖರ್ಗೆ ಅವರು ಅಧಿಕಾರ ಹಂಚಿಕೆ ಕುರಿತು ಕೆಲ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ದಾಖಲೆ ಮಟ್ಟದ ಹುಂಡಿ ಸಂಗ್ರಹ
ಈ ಕುರಿತು ಮಾತನಾಡಿದ ಅವರು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ನಾಲ್ಕು ಮಂದಿ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಸಿಎಂ, ಡಿಸಿಎಂ ಸೇರಿದಂತೆ ನಾಲ್ಕು ಮಂದಿ ನಾಯಕರನ್ನು ಕರೆಸಿ ಎಲ್ಲರೂ ಒಟ್ಟಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಏಕಾಂಗಿಯಲ್ಲ. ಅದೊಂದು ತಂಡ. ಹೈಕಮಾಂಡ್ ಒಟ್ಟಿಗೆ ಕುಳಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಮುಂದೆ ಏನು ಮಾಡಬೇಕೆಂದು ತೀರ್ಮಾನಿಸುತ್ತೇವೆ ಎಂದು ಹೇಳಿದರು.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…