ಬೆಂಗಳೂರು: ರಾಯಚೂರಿಗೆ ಏಮ್ಸ್‌ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ರಾಯಚೂರಿಗೆ ಏಮ್ಸ್ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ಧ ಕರ್ನಾಟಕದ ಜನತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದರು.
ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ರಾಯಚೂರು ಪ್ರಮುಖವಾಗಿದೆ. ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಷ್ಟ್ರಮಟ್ಟದ ಆರೋಗ್ಯ ಹಾಗೂ ಶೈಕ್ಷಣಿಕ ಸಂಸ್ಥೆಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕು. ಆ ಮೂಲಕ ಆ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಹಲವಾರು ಬಾರಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಮಾಡಿರುವ ಮನವಿಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸ್ಪಂದಿಸಿಲ್ಲ.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಆಗಲೇಬೇಕು. ಈ ಮೂಲಲ ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎನ್ನುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆರಂಭವಾದ ಅನಿರ್ದಿಷ್ಟಾವಧಿ ಹೋರಾಟ ಇಂದು 1000 ದಿನಗಳಿಗೆ ಕಾಲಿಟ್ಟಿದೆ ಎಂದು ಮಾಹಿತಿ ನೀಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…