ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ.
ಈ ಸಂಬಂಧ ಅಪರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎರಡು ಪ್ರತ್ಯೇಕ ಸೂಚನೆ ನೀಡಿರುವ ಅವರು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ವಾಯುಪಡೆಗೆ ನೀಡಲಾಗಿದ್ದ 452ಎಕರೆ 4½ಗಂಟೆ ಭೂ ಮಂಜೂರಾತಿಯನ್ನು ರಾಜ್ಯ ಸರ್ಕಾರ 2017ರ ಅಕ್ಟೋಬರ್ 09ರಂದು ರದ್ದುಗೊಳಿಸಿದ್ದು, ಇದನ್ನು ಅತ್ಯಗತ್ಯವಾದ ಶ್ವಾಸತಾಣವಾಗಿ ಉಳಿಸಲು ತೀರ್ಮಾನಿಸಲಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ರಾಷ್ಟ್ರೀಯ ಹಿತದ ದೃಷ್ಟಿಯಿಂದ ಭೂಮಂಜೂರಾತಿ ರದ್ದು ಪಡಿಸಿದ ಬಳಿಕವೂ ಭಾರತೀಯ ವಾಯುಪಡೆ ಸದರಿ ಭೂಮಿಯನ್ನು ಬಳಸಲು, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ರಡಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಪರ್ಯಾಯ ಭೂಮಿ ನೀಡುವಂತೆ ತಿಳಿಸಿದ್ದರೂ ವಾಯುಪಡೆ ನಿಯಮ ಉಲ್ಲಂಘಿಸಿದೆ. ಈ ನಿಟ್ಟಿನಲ್ಲಿ 64ಎ ನೋಟಿಸ್ ನೀಡಿ ಒತ್ತುವರಿ ತೆರವು ಮಾಡಿಸಲು ಸೂಚಿಸಿದ್ದಾರೆ.
ಈ ಜಮೀನಿಗೂ ವಾಯುಪಡೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಈಶ್ವರ ಖಂಡ್ರೆ, ಇನ್ನು ಮುಂದೆ ಸದರಿ ಪ್ರದೇಶದಲ್ಲಿ ಅನಿವಾರ್ಯವಾಗಿ ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ನಿಯಮಾನುಸಾರ ಅರಣ್ಯ ಇಲಾಖೆಯಿಂದ (ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ) ಅನುಮತಿ ಪಡೆಯುವಂತೆ ಸುತ್ತೋಲೆ ಹೊರಡಿಸಲು ಮತ್ತು ಎಲ್ಲ ಇಲಾಖೆಗಳಿಗೂ ಮಾಹಿತಿ ನೀಡಲು ಕ್ರಮ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…