Mysore
23
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರನ್ನೂ ಮೀರಿಸುವ ಹಂತದಲ್ಲಿ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ಉಸಿರಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇದನ್ನು ಓದಿ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರಿನ ಏರ್‌ ಕ್ವಾಲಿಟಿ ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಈ ಮೂಲಕ ಜನರನ್ನು ಆತಂಕಕ್ಕೀಡುಮಾಡಿತ್ತು. ಇದೀಗ AQI ಬಳ್ಳಾರಿಯಲ್ಲಿ 200ರ ಗಡಿ ದಾಟಿದೆ. ಇದರೊಂದಿಗೆ PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿದೆ.

ಬಳ್ಳಾರಿಯಲ್ಲಿ ಇಂದು ದಿಢೀರನೇ ಗಾಳಿಯ ಗುಣಮಟ್ಟ 240ಕ್ಕೆ ತಲುಪಿದದು, ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳು ಕಾಡುತ್ತಿವೆ.

Tags:
error: Content is protected !!