ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಐಶ್ವರ್ಯಾ ಗೌಡ ಕೇಸ್‌ನಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ಅದರಲ್ಲಿ ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಪರಿಚಯ ಎಂದು ಹೇಳಿ ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಐಶ್ವರ್ಯಾ ಗೌಡ ನಿಖಿಲ್ ಹಾಗೂ ಅನಿತಾ ಅವರನ್ನು ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಪ್ರಕರಣದ ಬಗ್ಗೆ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದೇನೆ. ಕೇಸ್‌ನ ಹಿನ್ನೆಲೆ ತಿಳಿದುಕೊಂಡಿದ್ದೇನೆ ಎಂದರು.
ಈ ಪ್ರಕರಣದಲ್ಲಿ ನಿಖಿಲ್ ಹಾಗೂ ಅನಿತಾ ಹೆಸರನ್ನು ಎಳೆದಿದ್ದಾರೆ ಎಂದು ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು ಯಾವಾಗ ಏನು ಬೇಕಾದರೂ ಮಾಡುತ್ತದೆ ಎಂದು ಕಿಡಿಕಾರಿದರು.
ಇನ್ನು ನಿಖಿಲ್ ಹಾಗೂ ಅನಿತಾ ಕುಮಾರಸ್ವಾಮಿ ಅವರ ಮುಖಗಳನ್ನೇ ನೋಡಿಲ್ಲ. ಹೇಗೆ ಅವರ ಪರಿಚಯ ಎಂದು ಸುದ್ದಿ ಮಾಡಿಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಈ ಪ್ರಕರಣದ ಹಿಂದೆ ಯಾರಿದ್ದಾರೆ? ನಿಖಿಲ್ ಹಾಗೂ ಅನಿತಾರನ್ನು ಯಾಕೆ ಈ ಪ್ರಕರಣದಲ್ಲಿ ತಂದ್ರಿ? ಇದನ್ನು ಸರ್ಕಾರ ಎಂದು ಕರೆಯುತ್ತೀರಾ ಎಂದು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…