ರಾಜ್ಯ

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

12 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

12 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

12 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

12 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

12 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

13 hours ago