Mysore
21
few clouds

Social Media

ಶನಿವಾರ, 24 ಜನವರಿ 2026
Light
Dark

ಮಹಿಳೆಯರ ರಕ್ಷಣೆಗೆಂದೇ ಜಾರಿಗೆ ಬರಲಿದೆ ಅಕ್ಕಾ ಪಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ

ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್‌ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಈಗಾಗಲೇ ಬೀದರ್‌ ಜಿಲ್ಲೆಯಲ್ಲಿ ಅಕ್ಕಾ ಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆಗಸ್ಟ್.‌15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.

ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

Tags:
error: Content is protected !!