ರಾಜ್ಯ

ಆಳಂದ ಮತಗಳ್ಳತನ ಕೇಸ್‌ | ತನಿಖೆಗೆ ಸಿಐಡಿ ವಿಶೇಷ ತನಿಖಾ ತಂಡ ರಚಿಸಿದ ಸರ್ಕಾರ

ಬೆಂಗಳೂರು : ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.

ಸರ್ಕಾರದ ಆದೇಶ ಹೀಗಿದೆ…
2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ. 2023ರ ಫೆಬ್ರವರಿ 21ರಂದು ನೀಡಿದ ದೂರಿನ ಮೇರೆಗೆ ಆಳಂದ ಪೊಲೀಸ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 182, 419, 464, 465 ರಂತೆ ಪ್ರಕರಣ (ಮೊಕದ್ದಮೆ ಸಂಖ್ಯೆ: 26/2023) ದಾಖಲಾಗಿದೆ. ಈ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗಬಹುದಾದ ಇತರೇ ಪ್ರಕರಣಗಳ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದಕ್ಕಾಗಿ ಸಿಐಡಿ ಪೊಲೀಸ್‌ ಮಹಾ ನಿರ್ದೇಶಕರಾದ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನ ರಚಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – 2023ರ ಕಲಂ 2(ಯು) ಅಡಿಯಲ್ಲಿ ತನಿಖಾ ತಂಡಕ್ಕೆ ಪೊಲೀಸ್‌ ಠಾಣಾಧಿಕಾರ ನೀಡಲಾಗಿದೆ. ಈ ಎಸ್‌ಐಟಿ ತಂಡಕ್ಕೆ ಆಳಂದ ಪ್ರಕರಣ ಸೇರಿದಂತೆ ರಾಜ್ಯದ ಇತರೇ ಪೊಲೀಸ್‌ ಠಾಣೆಗಳಲ್ಲೂ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್‌ ಪ್ರಕರಣಗಳನ್ನು ತನಿಖೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಡಿಜಿ & ಐಜಿಪಿ ಈ ವಿಶೇಷ ತನಿಖಾ ತಂಡಕ್ಕೆ ಅವಶ್ಯಕವಿರುವ ಇತರೇ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಒಸಗಿಸುವಂತೆ ಆದೇಶದಲ್ಲಿ ತಿಳಿಸಿದೆ.

ಅದರಂತೆ ತನಿಖಾ ತಂಡವು ಎಲ್ಲಾ ಆಮಾಯಗಳಲ್ಲಿ ಪ್ರಕರಣಗಳ ಸಮಗ್ರ ತನಿಖೆ ಕೈಗೊಂಡು, ಶೀಘ್ರದಲ್ಲೇ ತನಿಖೆಯನ್ನು ಪೂರ್ಣಗೊಳಿಸಬೇಕು. ಬಳಿಕ ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

29 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

33 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago