ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ.
ತೆರಿಗೆಗೆ ಪ್ರಸ್ತಾವನೆ ಜಾರಿಯಾದರೆ, ಕೇವಲ ಒಂದು ವರ್ಷಕ್ಕೆ ರಾಜ್ಯದಲ್ಲಿ ಬಿಯರ್ ಬೆಲೆ ಮೂರನೇ ಬಾರಿ ಹೆಚ್ಚಳವಾದಂತಗಲಿದೆ. ಈ ಮೂಲಕ ಬಿಯರ್ ಕುಡಿಯುವವರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಶೇ.5 ಮತ್ತು ಶೇ6.5ರ ನಡುವಿನ ಆಲ್ಕೋಹಾಲ್ ಅಂಶ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬೃಹತ್ ಲೀಟರ್ಗೆ 16 ರೂ. ಸುಂಕವನ್ನು ಪ್ರಸ್ತಾಪಿಸಲಾಗಿದೆ. ಶೇ.5ಕ್ಕಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಬಿಯರ್ಗಳ ಮೇಲೆ ಪ್ರತಿ ಬಲ್ಕ್ ಲೀಟರ್ಗೆ 10 ರೂ. ಸುಂಕ ಹೆಚ್ಚಳ ಮಾಡುವ ಪ್ರಸ್ತಾಪವಿದೆ. ಈ ನೂತನ ಪರಿಷ್ಕರಣ ದರವು ಅಕ್ಟೋಬರ್ 1ರಿಂದಲೇ ಜಾರಿಯಾಗಲಿದೆ ಎಂದು ವರದಿಯಾಗಿದೆ.
ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವಂತೆ ಅಬಕಾರಿ ಇಲಾಖೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಹೀಗಾಗಿ, ಶೀಘ್ರದಲ್ಲೇ ಅಬಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸ್ಟ್ರಾಂಗ್ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದುಬಂದಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…