ರಾಜ್ಯ

Alert | ಚಾರಣಿಗರಿಗೆ ನಿರಾಸೆ ; ಕುದುರೆಮುಖದ 11 ಟ್ರೆಕ್ಕಿಂಗ್‌ ಪಥಗಳಿಗೆ ಅರಣ್ಯ ಇಲಾಖೆ ನಿಷೇಧ

 ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ ಜಾರಿಗೆ ಬರುವಂತೆ ಮುಂದಿನ ಸೂಚನೆ ಹೊರಡುವವರೆಗೆ ಈ ನಿರ್ಬಂಧವನ್ನು ವಿಧಿಸಲಾಗಿದೆ.

ಬೇಸಿಗೆ ಹತ್ತಿರವಾಗುತ್ತಿರುವುದರಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಬೆಂಕಿ ಕಾಲ ಆರಂಭವಾಗುತ್ತಿದೆ. ಅರಣ್ಯದಲ್ಲಿ ಒಣ ಎಲೆಗಳು ಮತ್ತು ಹುಲ್ಲು ಹೆಚ್ಚಿರುವುದರಿಂದ ಕಾಡ್ಗಿಚ್ಚು ಸಂಭವಿಸುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅರಣ್ಯ ಇಲಾಖೆ ಕೆಲವು ಚಾರಣ ಮಾರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಗಂಗಡಿಕಲ್ ಚಾರಣ, ಕುದುರೆಮುಖ ಚಾರಣ, ಕುರಿಂಜಾಲು ಚಾರಣ, ವಾಲಿಕುಂಜ ಚಾರಣ – ಎಸ್.ಕೆ.ಬಾರ್ಡರ್, ವಾಲಿಕುಂಜ ಚಾರಣ – ಕೆರ್ವಾಶೆ, ನರಸಿಂಹ ಪರ್ವತ – ಕಿಗ್ಗ, ನರಸಿಂಹ ಪರ್ವತ – ಮಳಂದೂರು, ಕೊಡಚಾದ್ರಿ-ವಳೂರು, ಕೊಡಚಾದ್ರಿ – ಹಿಡ್ಲುಮನೆ, ಬಂಡಾಜೆ – ವೊಳಂಬ್ರ, ನೇತ್ರಾವತಿ ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರವೇಶ ನಿಷೇಧಿಸಿರುವ ಜಾಗಗಳಲ್ಲಿ ಕಾವಲುಗಾರರನ್ನು ನೇಮಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಾಡ್ಗಿಚ್ಚು ಹೆಚ್ಚಾಗಿ ಮಾನವನಿಂದಲೇ ಹೆಚ್ಚಾಗಿ ಸಂಭವಿಸುತ್ತಿವೆ. ಹಿಂದಿನ ವರ್ಷಗಳಲ್ಲಿ ಅನೇಕ ಘಟನೆಗಳು ಉದ್ದೇಶಪೂರ್ವಕವಾಗಿಯೋ ಅಥವಾ ಗೊತ್ತಿಲ್ಲದೆಯೇ ಚಾರಣಕ್ಕೆ ಬಂದವರಿಂದ ಸಂಭವಿಸಿದೆ. ಸಮಗ್ರ ತಪಾಸಣೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾರ್ಗದರ್ಶಕರ ನಿಯೋಜನೆಯಿದ್ದರೂ ಸಹ ಈ ಘಟನೆಗಳು ನಡೆದಿವೆ.

ಹೀಗಾಗಿ ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಾದ್ಯಂತ ಟ್ರಕ್ಕಿಂಗ್ ಅನ್ನು ಬಂದ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗಣತಿ ಕಾರ್ಯ ನಡೆಯುತ್ತಿರುವುದೂ ಕೂಡ ಮತ್ತೊಂದು ಕಾರಣವಾಗಿದೆ. ಹುಲಿ ಗಣತಿ ಹಾಗೂ ಮಾನವವನ್ಯಜೀವಿ ಸಂಘರ್ಷ ತಡೆಯುವ ಕಾರ್ಯದಲ್ಲಿ ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಟ್ರಕ್ಕಿಂಗ್‍ಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಕಷ್ಟಕರ. ಅಲ್ಲದೆ, ಈ ಬಾರಿ ಗಣತಿ ಕಾರ್ಯಕ್ಕೆ ಸ್ವಯಂಸೇವಕರನ್ನು ಸೇರ್ಪಡೆಗೊಳಿಸಲಾಗಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅರಣ್ಯ ಪ್ರವೇಶ ನಿರ್ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

3 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

4 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

4 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

5 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

8 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

13 hours ago