ರಾಜ್ಯ

Pahalgam Attack | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು(ಏ.23) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದರು.

ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

2 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago