Mysore
30
few clouds

Social Media

ಮಂಗಳವಾರ, 27 ಜನವರಿ 2026
Light
Dark

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ “ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ.

ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ. RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ. ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದರು.

 

Tags:
error: Content is protected !!