ರಾಜ್ಯ

ನನಗೆ ಇರುವುದು ಬಿಡದಿ ಬಳಿ ಜಮೀನು ಮಾತ್ರ : ಡಿಕೆಶಿ ಯಾವ ಕಷ್ಟಪಟ್ಟು ಇಷ್ಟು ಆಸ್ತಿ ಸಂಪಾದಿಸಿದ್ದಾರೆ? :ಹೆಚ್‌ಡಿಕೆ

ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. ಸಿನಿಮಾದಲ್ಲಿ ದುಡಿದ ದುಡ್ಡಿನಲ್ಲಿ ಅದನ್ನು ಖರೀದಿ ಮಾಡಿದ್ದು. ರಾಜಕೀಯಕ್ಕೆ ಬರುವುದಕ್ಕೆ ಮೊದಲೇ ಈ ಜಾಮೀನು ಖರೀದಿ ಮಾಡಿದ್ದೇನೆ. ನಾನು ತೋಟದಲ್ಲಿ ರೆಸಾರ್ಟ್ ಮಾಡಿಲ್ಲ. ಬಂದು ನೋಡಪ್ಪ. ಕಲ್ಲಂಗಡಿ, ಬಾಳೆ, ಕೊಬ್ಬರಿ ಬೆಳೆದಿದ್ದೇನೆ. ಎಲ್ಲಾ ವಿಡಿಯೋ ಇದೆಯಪ್ಪ. ದೇವೇಗೌಡರು ವಿರೋಧ ಪಕ್ಷದಲ್ಲಿ ಇದ್ದಾಗಲೂ ನಿಕ್ಕರ್ ಹಾಕಿಕೊಂಡು ಶನಿವಾರ, ಭಾನುವಾರ ತೋಟದ ಕೆಲಸ ಮಾಡುತ್ತಿದ್ದರು ಎಂದರು.

ಡಿ.ಕೆ.ಶಿವಕುಮಾರ್ ಯಾವ ಕಷ್ಟಪಟ್ಟು ಆಸ್ತಿ ಸಂಪಾದನೆ ಮಾಡಿದ್ದಾರೆ? ಕಲ್ಲು ಬಂಡೆ ಕದ್ದು ವಿದೇಶಕ್ಕೆ ಸಾಗಿಸಿರೋದೇ ಅವರ ಕೆಲಸ. ಹೇಳಿದರೆ ಆ ವ್ಯಕ್ತಿಯ ಬಗ್ಗೆ ಕಂತೆ ಕಂತೆ ಹೇಳಬಹುದು. ಅವರಿಗೆ ನನ್ನದೇ ಆಪತ್ತು. ಅದಕ್ಕೆ ನನ್ನ ವಿರುದ್ದ ಮಾತಾಡ್ತಿದ್ದಾರೆ. 8 ಒಕ್ಕಲಿಗರಿಗೆ ಸೀಟು ಕೊಟ್ಟಿದ್ದೀನಿ ಅಂತಾರೆ. ಕೊಟ್ಟು ಏನ್ ಆಯ್ತು. ಸಿಎಂ ಆಗೋ ಅವಕಾಶ ಇದೆ, ಆಶೀರ್ವಾದ ಮಾಡಿ ಅಂದರು. ಈಗ ಒಂದು ಸಾರಿ ಪೇಪರು ಪೆನ್ನು ಕೊಟ್ಟು ತಮಿಳುನಾಡಿಗೆ ನೀರು ಹೋಗ್ತಿಲ್ಲವಾ? ಈಗ ಮತ್ತೆ ಪೆನ್ನು ಪೇಪರ್ ಕೊಡಬೇಕಾ? ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಹಿಳಾ ಆಯೋಗ ದೂರು ದಾಖಲು ಮಾಡಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ; ಮಹಿಳಾ ಆಯೋಗ ನೊಟೀಸ್ ಕೊಡಲಿ ಉತ್ತರ ಕೊಡ್ತೀನಿ ಎಂದು ಉತ್ತರಿಸಿದರು.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿ ಪಕ್ಷದ ಅನೇಕ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

12 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

17 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

22 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

34 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

37 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

1 hour ago