ರಾಜ್ಯ

ಆಲ್‌ ಐಸ್‌ ಆನ್‌ ಚಿತ್ತಾಪುರ್‌ : ನ.2ಕ್ಕೆ RSS ಶಕ್ತಿ ಪ್ರದರ್ಶನ

ಬೆಂಗಳೂರು : ಸ್ಥಳೀಯ ಆಡಳಿತ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ನೀಡಿದರೆ ನ.2ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಭಾರೀ ಪ್ರಮಾಣದ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ.

ರಾಜ್ಯ ರಾಜಕಾರಣದಲ್ಲಿ ಆರ್‌ಎಸ್‌ಎಸ್ ವರ್ಸಸ್ ಸರ್ಕಾರ ಎಂಬಂತಾಗಿರುವ ಆರ್‌ಎಸ್‌ಎಸ್ ಪಥಸಂಚಲನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಆರಂಭಿಸಲಾಗಿದೆ.

ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್‍ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್‌ ಖರ್ಗೆ ರಿಯಾಕ್ಷನ್‌

ಆಲ್ ಐಸ್ ಆನ್ ಚಿತ್ತಾಪುರ್(ಎಲ್ಲರ ಕಣ್ಣು ಚಿತ್ತಪುರದತ್ತ) ಎಂಬ ಹಾಶ್‌ಟ್ಯಾಗ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಇದನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಈಗಾಗಲೇ ಸ್ಥಳೀಯ ಪುರಸಭೆ ಅಽಕಾರಿಗಳು ಹಾಗೂ ಜಿಲ್ಲಾಽಕಾರಿಗಳಿಗೆ ಮನವಿಪತ್ರ ಸಲ್ಲಿಸಿದೆ.

ಇದೇ 24ರೊಳಗೆ ವರದಿ ಸಲ್ಲಿಸಬೇಕೆಂದು ಕಲಬುರಗಿ ಸಂಚಾರಿ ಪೀಠದ ನ್ಯಾಯಾಲಯ ಸೂಚನೆ ನೀಡಿದೆ. ಒಂದು ವೇಳೆ ಕಾನೂನು ಚೌಕಟ್ಟಿನಡಿ ಪಥಸಂಚಲನ ನಡೆಸಲು ಅನುಮತಿ ಸಿಕ್ಕರೆ ಸುಮಾರು 25 ಸಾವಿರ ಸ್ವಯಂ ಸೇವಕರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸಲು ಸಂಘಪರಿವಾರದ ನಾಯಕರು ತೀರ್ಮಾನಿಸಿದ್ದಾರೆ.

ಭಾನುವಾರ ಪಥಸಂಚಲನದ ವೇಳೆ ಕನಿಷ್ಠ 2 ಸಾವಿರ ಆರ್‌ಎಸ್‌ಎಸ್‌ನ ಗಣವೇಶಧಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದರು. ಆದರೆ ಕಾನೂನು ಸುವ್ಯವಸ್ಥೆ ಮುಂದಿಟ್ಟು ಚಿತ್ತಾಪುರ ತಹಸಿಲ್ದಾರ್ ನಿಷೇಧ ಹೇರಿದ್ದರು.

ಆಂದೋಲನ ಡೆಸ್ಕ್

Recent Posts

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

28 mins ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

1 hour ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

14 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

15 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

17 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

17 hours ago