ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ಪಕ್ಷದ ಶಾಸಕರು ಬಜೆಟ್ ಅಧಿವೇಶನದಲ್ಲಿ ಭಾಗಿಯಾಗಬೇಕು. ಶಾಸಕರು ಪರಿಷತ್ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ 17 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಅಪಾರ ಅನುಭವವಿದೆ. ಮೊದಲ ಬಾರಿಗೆ ಬಜೆಟ್‌ಗೆ ಸಂಬಂಧಿಸಿದ ಕಾರ್ಯಾಗಾರ ಆಯೋಜನೆ ಮಾಡಲಾಗಿದೆ. ಆದ್ದರಿಂದ ಕಾರ್ಯಾಗಾರದಲ್ಲಿ ಎಲ್ಲಾ ಶಾಸಕರು ಭಾಗಿಯಾಗಬೇಕು ಎಂದು ಕರೆ ನೀಡಿದರು.





