Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ

ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಇಂದು ವಿಧಾನಸೌಧದಲ್ಲಿ ಸಂಜೆ ೪ ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಹಾಗೂ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ  ರಾಜ್ಯದ ಕೇಂದ್ರ ಸಚಿವರು, ಸಚಿವರು, ಕಾವೇರಿ ಕಣಿವೆಯ ಶಾಸಕರು ಭಾಗಿಯಾಗಲಿದ್ದಾರೆ.

Tags: