ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ಮೂರು ವರ್ಷಗಳಿಗೊಮ್ಮೆ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯುತ್ತದೆ ಎಂದರು.
ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ನಿಮಗೂ ಆಸೆ ಇದೆಯೇ ಎಂಬ ಪ್ರಶ್ನೆಗೆ, ಈಗ ನಮ್ಮ ಬಿಜೆಪಿ ಪಕ್ಷದಲ್ಲಿ 60ಕ್ಕೂ ಹೆಚ್ಚು ಶಾಸಕರಿದ್ದಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಹುದ್ದೆ ಆಲಂಕರಿಸಬೇಕು ಎನ್ನುವ ಆಸೆ ಇದೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ ಎಂದು ಉತ್ತರಿಸಿದರು.
ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿ, ವರಿಷ್ಠರು ಈ ವಿಚಾರವಾಗಿ ಅಸಮಾಧಾನಗೊಂಡಿರುವ ನಾಯಕರ ಜೊತೆ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಇನ್ನು 8-10 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದರು.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…