ರಾಜ್ಯ

ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದೆ: ಮುರುಗೇಶ್‌ ನಿರಾಣಿ

ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದಲ್ಲಿ ಮೂರು ವರ್ಷಗಳಿಗೊಮ್ಮೆ ಜಿಲ್ಲಾ, ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯುತ್ತದೆ ಎಂದರು.

ರಾಜ್ಯಾಧ್ಯಕ್ಷ ಹುದ್ದೆಯ ಬಗ್ಗೆ ನಿಮಗೂ ಆಸೆ ಇದೆಯೇ ಎಂಬ ಪ್ರಶ್ನೆಗೆ, ಈಗ ನಮ್ಮ ಬಿಜೆಪಿ ಪಕ್ಷದಲ್ಲಿ 60ಕ್ಕೂ ಹೆಚ್ಚು ಶಾಸಕರಿದ್ದಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಹುದ್ದೆ ಆಲಂಕರಿಸಬೇಕು ಎನ್ನುವ ಆಸೆ ಇದೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಅಮಿತ್‌ ಶಾ ಮತ್ತು ನರೇಂದ್ರ ಮೋದಿ ಅವರ ನಿರ್ಧಾರವೇ ಅಂತಿಮ ಎಂದು ಉತ್ತರಿಸಿದರು.

ಪಕ್ಷದ ಅಸಮಾಧಾನದ ಬಗ್ಗೆ ಮಾತನಾಡಿ, ವರಿಷ್ಠರು ಈ ವಿಚಾರವಾಗಿ ಅಸಮಾಧಾನಗೊಂಡಿರುವ ನಾಯಕರ ಜೊತೆ ಫೋನ್‌ ಕರೆಯಲ್ಲಿ ಮಾತನಾಡಿದ್ದಾರೆ. ಇನ್ನು 8-10 ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಲಿದ್ದೇವೆ ಎಂದರು.

 

ಆಂದೋಲನ ಡೆಸ್ಕ್

Recent Posts

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

49 mins ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

1 hour ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

4 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

8 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

9 hours ago