ಬೆಂಗಳೂರು : ನವೆಂಬರ್ ಕ್ರಾಂತಿಯ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಕೇವಲ ಮಾಧ್ಯಮ ಸೃಷ್ಟಿ ಎಂದು ಗುರುವಾರ ಹೇಳಿದ್ದಾರೆ.
ನನ್ನ ಸ್ಥಾನ ಮೊದಲಿನಿಂದಲೂ ಗಟ್ಟಿಯಾಗಿದೆ. ಈಗಲೂ ಗಟ್ಟಿಯಾಗಿದೆ ಮತ್ತು ಭವಿಷ್ಯದಲ್ಲಿಯೂ ಹಾಗೆಯೇ ಮುಂದುವರಿಯುತ್ತದೆ ಎಂದು ಸಿ.ಎಂ ಸಿದ್ದರಾಮಯ್ಯ ಒತ್ತಿ ಹೇಳಿದರು.
ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ ಎಂದರು.
ಇದನ್ನೂ ಓದಿ:-ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ
2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ಸಿಎಂ ತಿಳಿಸಿದರು.
ಐದು ವರ್ಷಗಳ ಕಾಲ ನೀವೇ ಸಿಎಂ ಆಗಿ ಇರುತ್ತೀರಾ? ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಸಿಎಂ, “ಇದರ ಅರ್ಥವೇನು? ಇವು ಅನಗತ್ಯ ಚರ್ಚೆಗಳು. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡೋಣ ಅಂತ ನಾನು ಪಕ್ಷದ ಹೈಕಮಾಂಡ್‌ಗೆ ಹೇಳಿದ್ದೆ. ಅದರ ನಂತರವೇ ಅಧಿಕಾರ ಹಂಚಿಕೆಯ ಕುರಿತು ಈ ಚರ್ಚೆಗಳು ಪ್ರಾರಂಭವಾದವು” ಎಂದರು.
ಇದೇ ವೇಳೆ ಸಂಪುಟ ಪುನರ್ರಚನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆಯೇ ಎಂದು ಕೇಳಿದಾಗ, ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…