ಮೈಸೂರು : ಕರ್ನಾಟಕದ ಅಭಿವೃದ್ಧಿಯು ಉತ್ತಮವಾಗಿದ್ದು, 4000 ಕೋಟಿಯ ಕಾಮಗಾರಿ ನಡೆಯುತ್ತಿದ್ದು, 2024 ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಹೇಳಿದರು.
ಇಂದು (ಮಾ.೧೦) ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರೂ.4000 ಕೋಟಿಗೂ ಅಧಿಕ ವೆಚ್ಚದ 266 ಕಿ.ಮೀ ಉದ್ದದ 22 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಇತರೆ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ನೀಡಿದ್ದು, ಇನ್ನಾವುದೇ ಪ್ರಸ್ತಾವನೆಗಳಿದ್ದಲಿ ಅವುಗಳನ್ನು ನೀಡಿದರೆ ಎಲ್ಲವನ್ನು ಪರಿಶೀಲಿಸಿ ಡಿ ಪಿ ಆರ್ ಮಾಡಲು ಒಪ್ಪಿಗೆ ನೀಡಲಾಗುವುದು ಎಂದರು.
ಕರ್ನಾಟಕ ಸಾಂಸ್ಕೃತಿಕ ನೆಲೆ ಬೀಡಾಗಿದ್ದು, ಇಲ್ಲಿನ ಸಾಹಿತ್ಯ,ಸಂಸ್ಕೃತಿ ಕರ್ನಾಟಕದ ಇತಿಹಾಸವನ್ನು ಬಿಂಬಿಸುತ್ತವೆ. ಇದೇ ಡಿಸೆಂಬರ್ ವೇಳೆಗೆ ಬೆಂಗಳೂರು ರಿಂಗ್ ರೋಡ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರ ಆಗಲಿದೆ. 2024 ರ ಅಂತ್ಯಕ್ಕೆ ಕರ್ನಾಟಕ ರಸ್ತೆಗಳ ಚಿತ್ರಣ ಬದಲಾಗಲಿದ್ದು, ಅಮೆರಿಕಾದ ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದರು.
ಮುಂದಿನ ವರ್ಷದ ಜನವರಿ ಆರಂಭದಲ್ಲಿ ಬೆಂಗಳೂರು – ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಆರಂಭವಾಗಲಿದ್ದು, ಮೈಸೂರು – ಹಾಸನಕ್ಕೆ ರಿಂಗ್ ರಸ್ತೆ, ಕುಶಾಲನಗರ – ಮಾಣಿ ರಸ್ತೆಗೆ ಡಿ ಪಿ ಆರ್, ಮೈಸೂರು – ನಂಜನಗೂಡು ಆರು ಪಥದ ರಸ್ತೆ ನಿರ್ಮಾಣ, ಮಂಗಳೂರಿನ ವಿಕಾಸನಕ್ಕೆ ಗ್ರೀನ್ ಎಕ್ಸ್ಪ್ರೆಸ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮುನಿಸ್ವಾಮಿ, ಶಾಸಕರಾದ ಎಚ್.ಡಿ. ರೇವಣ್ಣ, ಎಚ್. ವಿಶ್ವನಾಥ್, ಸಿ.ಎನ್. ಮಂಜೇಗೌಡ, ಶ್ರೀವತ್ಸ, ಜಿ.ಡಿ. ಹರೀಶ್ ಗೌಡ ಉಪಸ್ಥಿತರಿದ್ದರು.
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…