ಡಾ.ರಾಜ್ ಕುಮಾರ್ ಅವರು ಕನ್ನಡ ಚಳವಳಿಗೆ ದುಮುಕಿದಾಗ ಗೋಕಾಕ್ ಚಳವಳಿಗೆ ವೇಗ ಹೆಚ್ಚಾಯ್ತು: ಸಿಎಂ
ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.
ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು ಎಂದರು.
ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದರು.
ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.
ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು, ಕನ್ನಡದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…