ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಂ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್ ಖಾನ್ ಪಠಾಣ ಮುನ್ನಡೆ ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿಯಿದೆ.
ಮೂರು ಕ್ಷೇತ್ರದ ಗೆಲುವು ಬಹುತೇಕ ಖಚಿತಗೊಂಡಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಇದಾಗಿದೆ ಎಂದು ಹೇಳಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…